Karnataka SSLC Result 2021: ಶೀಘ್ರದಲ್ಲೇ ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ; ರಿಸಲ್ಟ್ ನೋಡಲು ಹೀಗೆ ಮಾಡಿ
Karnataka SSLC Exam Results 2021 | ಆಗಸ್ಟ್ 10ರೊಳಗೆ ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಆನ್ಲೈನ್ನಲ್ಲಿ ರಿಸಲ್ಟ್ ನೋಡುವುದು ಹೇಗೆಂಬ ಮಾಹಿತಿ ಇಲ್ಲಿದೆ.
ಬೆಂಗಳೂರು: ಬೇರೆ ರಾಜ್ಯಗಳಂತೆ ಈ ಬಾರಿ ಕರ್ನಾಟಕದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ರದ್ದುಗೊಳಿಸದೆ ಬಹು ಆಯ್ಕೆ ಪ್ರಶ್ನೆ ಪತ್ರಿಕೆಯನ್ನು ಸಿದ್ಧಪಡಿಸಿ ಪರೀಕ್ಷೆ ಮಾಡಲಾಗಿತ್ತು. ಈ ಮೂಲಕ ರಾಜ್ಯ ಸರ್ಕಾರ ಸವಾಲಿನ ನಿರ್ಧಾರ ತೆಗೆದುಕೊಂಡಿತ್ತು. ಜುಲೈ 23ರಂದು ಎಸ್ಎಸ್ಎಲ್ಸಿ ಪರೀಕ್ಷೆ ಮುಗಿದಿದ್ದು, ಆ. 10ರೊಳಗೆ ಫಲಿತಾಂಶವೂ ಪ್ರಕಟವಾಗಲಿದೆ. ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ಎಲ್ಲರನ್ನೂ ತೇರ್ಗಡೆ ಮಾಡಲಾಗುವುದು ಎಂದು ಈಗಾಗಲೇ ಶಿಕ್ಷಣ ಇಲಾಖೆ ಘೋಷಣೆ ಮಾಡಿದೆ.
ಕರ್ನಾಟಕದಲ್ಲಿ 12 ಲಕ್ಷ ಪಿಯುಸಿ ಸೀಟ್ಗಳು ಲಭ್ಯವಿದೆ. ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳೂ ತೇರ್ಗಡೆ ಹೊಂದಲಿದ್ದು, ಎಲ್ಲ ವಿದ್ಯಾರ್ಥಿಗಳಿಗೂ ಮುಂದಿನ ವರ್ಷಕ್ಕೆ ಪಿಯುಸಿಗೆ ಸೀಟ್ಗಳು ಸಿಗಲಿವೆ. ಆಗಸ್ಟ್ 10ಕ್ಕೆ ಅಥವಾ ಆಗಸ್ಟ್ 10ರೊಳಗೆ ಕರ್ನಾಟಕ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ. ರಾಜ್ಯದಲ್ಲಿ ಈ ವರ್ಷ 8,19,694 ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದಾರೆ. ಈಗಾಗಲೇ ಸಿಬಿಎಸ್ಇ 10ನೇ ತರಗತಿ ಫಲಿತಾಂಶ ಪ್ರಕಟವಾಗಿದೆ. ಮುಂದಿನ ವಾರ ಕರ್ನಾಟಕದ 10ನೇ ತರಗತಿ ಫಲಿತಾಂಶವೂ ಹೊರಬೀಳಲಿದೆ.
ಫಲಿತಾಂಶ ಪ್ರಕಟವಾದ ನಂತರ ನಿಮ್ಮ ಎಸ್ಎಸ್ಎಲ್ಸಿ ರಿಸಲ್ಟ್ ವೀಕ್ಷಿಸಲು ಹೀಗೆ ಮಾಡಿ…
1. ಕರ್ನಾಟಕ ಸರ್ಕಾರದ ಅಧಿಕೃತ ವೆಬ್ಸೈಟ್ sslc.karnataka.gov.in ಕ್ಲಿಕ್ ಮಾಡಿ
2. ಸ್ಕ್ರೀನ್ನಲ್ಲಿ ರಿಸಲ್ಟ್ ಲಿಂಕ್ ಕಾಣಿಸಿಕೊಳ್ಳುತ್ತದೆ. ಆ ಲಿಂಕ್ ಅನ್ನು ಕ್ಲಿಕ್ ಮಾಡಿ
3. ನಿಮ್ಮ ರೋಲ್ ನಂಬರ್ ಅನ್ನು ಹಾಕಿ ಲಾಗಿನ್ ಆಗಿ
4. ರೋಲ್ ನಂಬರ್ ಜೊತೆಗೆ ಅಲ್ಲಿ ಕೇಳುವ ನಿಮ್ಮ ಇತರೆ ಮಾಹಿತಿಗಳನ್ನೂ ತುಂಬಿರಿ
5. ಫಲಿತಾಂಶವನ್ನು ವೀಕ್ಷಿಸಲು ನಿಮ್ಮ ಮಾಹಿತಿಯನ್ನು ಸಬ್ಮಿಟ್ ಮಾಡಿ
ಇದನ್ನೂ ಓದಿ;- Karnataka PU Result: ಪಿಯು ರಿಸಲ್ಟ್ ತಿರಸ್ಕರಿಸಿದ 878 ವಿದ್ಯಾರ್ಥಿಗಳು; ಆಗಸ್ಟ್ 19ಕ್ಕೆ ಪರೀಕ್ಷೆ

0 Comments